ಭಾರತೀಯ ಚಿತ್ರರಂಗದ ಅತ್ಯುನ್ನತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಈ ವರ್ಷ ಕನ್ನಡ ನಟ ಅನಂತ್ ನಾಗ್ ಅವರಿಗೆ ಲಭಿಸಿದೆ. ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ ಪುರಸ್ಕರಿಸಿ ಈ ಗೌರವ ನೀಡಲಾಗಿದೆ. 2024ನೇ ಸಾಲಿನಲ್ಲಿ ಈ ಪ್ರಶಸ್ತಿ ಅವರಿಗೆ ಲಭಿಸುತ್ತಿದೆ. ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದೆ.
ಕನ್ನಡ ಮಾತ್ರವಲ್ಲದೇ ಹಿಂದಿ ಹಾಗೂ ಮರಾಠಿ ಭಾಷೆ ಸಿನಿಮಾಗಳಲ್ಲಿ ನಟಿಸಿದ್ದಾರೆ. 50 ವರ್ಷಗಳ ಸಿನಿಜೀವನದಲ್ಲಿ ಅವರು ಬಣ್ಣ ಹಚ್ಚಿರುವ ಸಿನಿಮಾಗಳ ಸಂಖ್ಯೆ 300ಕ್ಕೂ ಅಧಿಕ. ಕಮರ್ಷಿಯಲ್ ಮಾತ್ರವಲ್ಲೇ ಆರ್ಟ್ ಸಿನಿಮಾಗಳಲ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಒಂದ್ಕಾಲದಲ್ಲಿ ಹೀರೊ ಆಗಿ ಮಿಂಚಿದ ಅನಂತ್ ಬಳಿಕ ಪೋಷಕ ಪಾತ್ರಗಳತ್ತ ವಾಲಿದ್ದರು. ಇವತ್ತಿಗೂ ಬಹುಬೇಡಿಕೆಯ ನಟನಾಗಿ ಚಿತ್ರರಂಗದಲ್ಲಿ ಗುರ್ತಿಸಿಕೊಂಡಿದ್ದಾರೆ. ತಮ್ಮ ನೈಜ ಅಭಿನಯದಿಂದ ಸಿನಿರಸಿಕರು ಮನಸೂರೆಗೊಂಡಿದ್ದಾರೆ.
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯು ಸ್ವರ್ಣ ಕಮಲದ ಪದಕ , ಶಾಲು ಹಾಗೂ 15 ಲಕ್ಷ ರೂ. ನಗದು ನಗದು ಬಹುಮಾನವನ್ನು ಒಳಗೊಂಡಿದೆ. ಭಾರತೀಯ ಚಿತ್ರರಂಗಕ್ಕೆ ದಾದಾಸಾಹೇಬ್ ಫಾಲ್ಕೆ ಅವರ ಕೊಡುಗೆಯನ್ನು ಸ್ಮರಿಸಲು ಕೇಂದ್ರ ಸರ್ಕಾರ 1969ರಲ್ಲಿ ಮೊದಲ ಬಾರಿಗೆ ಈ ಪ್ರಶಸ್ತಿ ನೀಡಲು ಆರಂಭಿಸಿದೆ. ಡಾ. ರಾಜ್‌ಕುಮಾರ್, ಛಾಯಾಗ್ರಾಹಕ ವಿ. ಕೆ ಮೂರ್ತಿ ಈ ಹಿಂದೆ ದಾದಾ ಸಾಹೇಬ್ ಫಾಲ್ಕೆ ಪಡೆದು ಕನ್ನಡಿಗರು ಎನಿಸಿಕೊಂಡಿದ್ದರು. ಅದೇ ಸಾಲಿಗೆ ಈಗ ಅನಂತ್ ನಾಗ್ ಸೇರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅನಂತ್ ನಾಗ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. "ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಿಂದ ಪುರಸ್ಕೃತರಾದ ಪ್ರಸಿದ್ಧ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳು. ಕಳೆದ ಹಲವು ದಶಕಗಳಿಂದ, ಅವರ ಸಹಜ ಅಭಿನಯ, ಗಮನಾರ್ಹ ವೈವಿಧ್ಯತೆ ಹಾಗೂ ಶ್ರೇಷ್ಠ ಕಲಾಪ್ರತಿಭೆಯು ಭಾರತೀಯ ಚಲನಚಿತ್ರರಂಗದಲ್ಲಿ, ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ, ಅವಿಸ್ಮರಣೀಯ ಛಾಪನ್ನು ಮೂಡಿಸಿವೆ. ನಿಜಕ್ಕೂ ಇದು ಒಬ್ಬ ಶ್ರೇಷ್ಠ ಕಲಾವಿದನಿಗೆ ಸಲ್ಲಬೇಕಾದ ಅರ್ಹ ಗೌರವವಾಗಿದೆ" ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಪ್ರತಿಕ್ರಿಯಿಸಿ "ಕನ್ನಡ ಚಿತ್ರರಂಗದ ಗರಿಮೆ, ಮೇರು ನಟ ಶ್ರೀ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ -2024' ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ಕ್ಷಣ" ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಕೂಡ ಅನಂತ್ ನಾಗ್ ಅವರಿಗೆ ಅಭಿನಂದನೆ ತಿಳಿಸಿ ಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳು, ಚಿತ್ರರಂಗದ ತಾರೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಅನಂತ್ ನಾಗ್ ಅವರಿಗೆ 2025ನೇ ಸಾಲಿನಲ್ಲಿ ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಿಂದ ಪುರಸ್ಕೃತರಾದ ಪ್ರಸಿದ್ಧ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳು.
— Narendra Modi (@narendramodi) September 16, 2026
ಕಳೆದ ಹಲವು ದಶಕಗಳಿಂದ, ಅವರ ಸಹಜ ಅಭಿನಯ, ಗಮನಾರ್ಹ ವೈವಿಧ್ಯತೆ ಹಾಗೂ ಶ್ರೇಷ್ಠ ಕಲಾಪ್ರತಿಭೆಯು ಭಾರತೀಯ ಚಲನಚಿತ್ರರಂಗದಲ್ಲಿ, ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ, ಅವಿಸ್ಮರಣೀಯ ಛಾಪನ್ನು ಮೂಡಿಸಿವೆ. ಅವರು ಅಭಿನಯಿಸಿದ ಪ್ರತಿಯೊಂದು… https://t.co/2jimAZM16T