ಬಿಗ್‌ಬಾಸ್ ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಸೆಲೆಬ್ರೆಟಿಗಳು ಹಾಗೂ ಕಾಮನ್‌ಮ್ಯಾನ್ ಎಂದು ಎರಡು ಗುಂಪುಗಳಾಗಿ ಸ್ಪರ್ಧಿಗಳನ್ನು ವೀಕ್ಷಕರು ಗುರ್ತಿಸುತ್ತಿದ್ದಾರೆ. ಮನೆ ಒಳಗೂ ಇದೇ ವಾತಾವರಣ ಇದೆ. ಕಾಮನ್‌ಮ್ಯಾನ್ ಆಗಿ ದೊಡ್ಮನೆ ಒಳಗೆ ಹೋಗಿರುವ ನಾಲ್ಕು ಜನ ವೀಕ್ಷಕರ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ವೀಕೆಂಡ್ ಶೋನಲ್ಲಿ ಕಿಚ್ಚ ಸರಿಯಾಗಿ ಕ್ಲಾಸ್ ತಗೊಂಡಿದ್ದಾರೆ.

ಇನ್ನು ಬಿಗ್‌ಬಾಸ್ ಮನೆಯಲ್ಲಿ ನಟಿ ಆಸಿಯಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. 'ಕನ್ಯಾಕುಮಾರಿ' ಮತ್ತು 'ಶ್ರಾವಣಿ ಸುಬ್ರಹ್ಮಣ್ಯ' ಧಾರಾವಾಹಿಗಳ ಮೂಲಕ ಆಕೆ ವೀಕ್ಷಕರಿಗೆ ಹತ್ತಿರವಾಗಿದ್ದಾರೆ. ಬಿಗ್‌ಬಾಸ್ ಮನೆಯಲ್ಲೂ ವೀಕ್ಷಕರ ಫೇವರಿಟ್ ಆಗಿದ್ದಾರೆ. ಈ ವಾರ ಕ್ಯಾಪ್ಟೆನ್ಸಿ ಟಾಸ್ಕ್ ಬಹಳ ಪೈಪೋಟಿಯಿಂದ ಕೂಡಿತ್ತು. ಅಂತಿಮವಾಗಿ ಸಂಗೀತಾ ಭಟ್ ಗೆದ್ದು ಮನೆಯ ಮೊದಲ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಇನ್ನು ಆಸಿಯಾಗೆ ತಮ್ಮ ತಂಡದಿಂದ ಸರಿಯಾದ ಬೆಂಬಲ ಸಿಗಲಿಲ್ಲ.

ಇದೆಲ್ಲದರ ನಡುವೆ ಆಸಿಯಾ ಟಾಸ್ಕ್ ವೇಳೆ ಕೆಟ್ಟ ಪದ ಬಳಸಿದ್ದಾರೆ ಎಂದು ಚರ್ಚೆ ನಡೀತಿದೆ. ಜಿಯೋ ಹಾಟ್‌ಸ್ಟರ್‌ನಲ್ಲಿ ಅದು ಪ್ರಸಾರವಾಗಿದೆ. ಆದರೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಎಪಿಸೋಡ್‌ನಲ್ಲಿ ಅದು ಕಂಡು ಬಂದಿಲ್ಲ. ಇದೇ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಸಿಬಿಸಿ ಚರ್ಚೆ ನಡೀತಿದೆ. ಬೇಕೆಂದೇ ಎಡಿಟ್ ಮಾಡಿದ್ದಾರೆ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಮಾಡುತ್ತಿದ್ದಾರೆ.