ಬಿಗ್‌ಬಾಸ್ ಖ್ಯಾತಿ ನಿವೇದಿತಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಪದೇ ಪದೆ ಟ್ರೋಲ್ ಆಗುತ್ತಾರೆ. ಬಿಂದಾಸ್ ಅವತಾರದಲ್ಲಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕದಿಯುವ ಬೊಂಬೆ ಟ್ರೋಲ್ ಆಗುವುದು ಇದೆ. ಇದೀಗ ಮತ್ತೆ ಸ್ವಿಮ್ ಸೂಟ್ ಧರಿಸಿ ಸಿಕ್ಕಾಪಟ್ಟೆ ಹಾಟ್ ಆಗಿ ದರ್ಶನ ಕೊಟ್ಟಿದ್ದಾರೆ. ಫೋಟೋಗಳು ಸಖತ್ ವೈರಲ್ ಆಗ್ತಿದೆ.
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿದ್ದ ನಿವೇದಿತಾ ಬಿಗ್‌ಬಾಸ್ ಕನ್ನಡ ಸೀಸನ್ 6ರಲ್ಲಿ ಸ್ಪರ್ಧಿಯಾಗಿದ್ದರು. ಅದೇ ಶೋನಲ್ಲಿ ರ್ಯಾಪರ್, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಕೂಡ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಶೋ ಮುಗಿದ ಬಳಿಕ ಇಬ್ಬರೂ ಪ್ರೀತಿಸಿ ಮದುವೆ ಆಗಿದ್ದರು. ಬಳಿಕ ಕೆಲ ಭಿನ್ನಾಭಿಪ್ರಾಯಗಳಿಂದ ಡಿವೋರ್ಸ್ ಪಡೆದು ದೂರಾಗಿದ್ದರು. ಇಬ್ಬರು ಬಣ್ಣ ಹಚ್ಚಿ ಸಿನಿಮಾಗಳಲ್ಲಿ ನಟಿಸುವ ಪ್ರಯತ್ನ ಮಾಡಿದ್ರು. ಆದರೆ ಯಶಸ್ಸು ಸಿಗಲಿಲ್ಲ. ಸದ್ಯ 'ಬೇಲ್' ಚಿತ್ರದ ಸ್ಪೆಷಲ್ ಸಾಂಗ್‌ನಲ್ಲಿ ಕುಣಿದು ನಿವೇದಿತಾ ಗಮನ ಸೆಳೆದಿದ್ದಾರೆ.
ಶಿವರಾಜ್‌ಕುಮಾರ್ ನಟನೆಯ 'ಬೇಲ್' ಚಿತ್ರದಲ್ಲಿ ಕುಮಾರಿಯಾಗಿ ನಿವೇದಿತಾ ಬಿಂದಾಸ್ ಹೆಜ್ಜೆ ಹಾಕಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಚೆಲುವೆ ಆಗಾಗ್ಗೆ ಫೋಟೊ, ವೀಡಿಯೋ ಶೇರ್ ಮಾಡುತ್ತಾರೆ. ಬೇರೆ ಬೇರೆ ಊರುಗಳಿಗೆ ದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಾರೆ. ಅದಕ್ಕೆ ಸಂಬಂಧಿಸಿದ ಪೋಸ್ಟ್‌ಗಳು ವೈರಲ್ ಆಗುತ್ತದೆ. ಲಾಸ್ ವೇಗಾಸ್ ಪ್ರವಾಸದ ವೇಳೆ ಬಿಕಿನಿ ತೊಟ್ಟು ಸ್ವಿಮ್ಮಿಂಗ್ ಪೂಲ್ ಮುಂದೆ ಕ್ಲಿಕ್ಕಿಸಿದ ಫೋಟೊಗಳನ್ನು ನಿವೇದಿತಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪಡ್ಡೆ ಹುಡುಗರು ನಿವೇದಿತಾ ಬಿಂದಾಸ್ ಅವತಾರಕ್ಕೆ ಫಿದಾ ಆಗಿದ್ದಾರೆ. ಲೈಕ್ಸ್, ಕಾಮೆಂಟ್ಸ್ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವರು ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ಅದಕ್ಕೆಲ್ಲಾ ಆಕೆ ತಲೆ ಕೆಡಿಸಿಕೊಳ್ಳುತ್ತಿಲ್ಲ.