ನಾನಿ ನಟನೆಯ 'ದಿ ಪ್ಯಾರಡೈಸ್' ಸಿನಿಮಾ ಬಿಡುಗಡೆಗೆ ಇನ್ನೆರಡು ದಿನ ಬಾಕಿಯಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗಲೇ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಶುರುವಾಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಲಕ್ಷ ಲಕ್ಷ ಟಿಕೆಟ್ ಈಗಾಗಲೇ ಬುಕ್ ಆಗಿ ಕೋಟಿ ಕೋಟಿ ಕಲೆಕ್ಷನ್ ಆಗ್ತಿದೆ. ಗುರುವಾರ ಸಿನಿಮಾ ತೆರೆಗೆ ಬರ್ತಿದ್ದು ಒಂದು ದಿನ ಮುನ್ನ ಪ್ರೀಮಿಯರ್ ಶೋಗಳು ನಡೀತಿದೆ.
ಶ್ರೀಕಾಂತ್ ಒಡೆಲಾ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಕಯಾದು ಲೋಹರ್ ನಾಯಕಿಯಾಗಿ ನಟಿಸಿದ್ದಾರೆ. ನಾನಿ ಎರಡು ಜಡೆ ಕಟ್ಟಿಕೊಂಡು ಬಹಳ ವಿಭಿನ್ನ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದು 'ಆಯಾ ಶೇರ್' ಸಾಂಗ್ ಹಿಟ್ ಆಗಿದೆ. ಇತ್ತೀಚೆಗೆ ಬಂದ ಸ್ಪೆಷಲ್ ಸಾಂಗ್ ಕೂಡ ಸದ್ದು ಮಾಡ್ತಿದೆ. ನಾನಿ ಜೊತೆ ಕೀರ್ತಿ ಸುರೇಶ್ ಹೆಜ್ಜೆ ಹಾಕಿದ್ದಾರೆ.
ಕರ್ನಾಟಕದಲ್ಲಿ ಕ್ರೇಜ್
ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ 6ಗಂಟೆಗೆ 'ದಿ ಪ್ಯಾರಡೈಸ್' ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ಅದಕ್ಕೂ ಮುನ್ನ ಬುಧವಾರ ರಾತ್ರಿ 9.30ಕ್ಕೆ ಸ್ಪೆಷಲ್ ಶೋಗಳನ್ನು ಏರ್ಪಡಿಸಲಾಗಿದೆ. ಬಹಳ ದೊಡ್ಡಮಟ್ಟದಲ್ಲಿ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗ್ತಿದೆ. ಟ್ರೈಲರ್ ಬಿಡುಗಡೆ ಮಾಡದೇ ಸಿನಿಮಾ ತೆರೆಗೆ ತರಲು ಚಿತ್ರತಂಡ ಮುಂದಾಗಿದೆ. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂತ್ ನಡೀತಿದೆ. ಈಗಾಗಲೇ 1 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಆಗಿದೆ. ಇತ್ತೀಚೆಗೆ ಬೆಂಗಳೂರಿಗೆ ಬಂದು ನಾನಿ ಸಿನಿಮಾ ಪ್ರಚಾರ ಮಾಡಿದ್ದರು.
ಬುಕ್ಕಿಂಗ್ ದಾಖಲೆ
'ದಿ ಪ್ಯಾರಡೈಸ್' ಅಡ್ವಾನ್ಸ್ ಬುಕ್ಕಿಂಗ್ ಶುರುವಾದ 24 ಗಂಟೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್ ಆಗಿತ್ತು. ಆ ಮೂಲಕ ಚಿತ್ರಕ್ಕಿರುವ ಕ್ರೇಜ್ ಎಂಥಾದ್ದು ಎಂದು ಗೊತ್ತಾಗಿದೆ. ಸದ್ಯ ಗಂಟೆಗೆ 14 ಸಾವಿರ ಟಿಕೆಟ್ ಬುಕ್ ಆಗ್ತಿದೆ. ಆ ಮೂಲಕ ಸಿನಿಮಾ ದೊಡ್ಡ ಓಪನಿಂಗ್ ಪಡೆಯುವ ಸುಳಿವು ಸಿಕ್ತಿದೆ. ಲವರ್ ಬಾಯ್ ಆಗಿ ಚಿತ್ರರಂಗದಲ್ಲಿ ಗುರ್ತಿಸಿಕೊಂಡಿದ್ದ ನಾನಿ ಬರ್ತಾ ಬರ್ತಾ ಆಕ್ಷನ್ ಹೀರೊ ಇಮೇಜ್ ಸಂಪಾದಿಸಿದ್ದಾರೆ. ಈಗ ಪ್ಯಾನ್ ಇಂಡಿಯಾ ಸಿನಿಮಾಗಳ ಮೂಲಕ ಅಬ್ಬರಿಸುತ್ತಿದ್ದಾರೆ.