ಮಹೇಶ್ ಬಾಬು ನಟನೆಯ 'ವಾರಣಾಸಿ' ಸಿನಿಮಾ ಬಹಳ ನಿರೀಕ್ಷೆ ಹುಟ್ಟಾಕ್ಕಿದೆ. ಎಸ್.ಎಸ್ ರಾಜಮೌಳಿ ನಿರ್ದೇಶನದ ಬಹಳ ಮಹತ್ವಾಕಾಂಕ್ಷೆಯ ಸಿನಿಮಾ ಇದು. ಬಹುಕೋಟಿ ವೆಚ್ಚದಲ್ಲಿ ಈ ಆಕ್ಷನ್ ಅಡ್ವೆಂಚರಸ್ ಸಿನಿಮಾ ನಿರ್ಮಾಣವಾಗ್ತಿದೆ. ಸಿನಿಮಾ ಕಥೆ ಏನು ಎನ್ನುವ ಬಗ್ಗೆ ಬಹಳ ಕುತೂಹಲವಿದೆ. ಇದು ತಂದೆ-ಮಗನ ಬಾಂಧವ್ಯದ ಕಥೆ ಎಂದು ಜಕ್ಕಣ್ಣ ಹೇಳಿದ್ದಾರೆ.
ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ 'ವಾರಣಾಸಿ' ಸಿನಿಮಾ ನಿರ್ಮಾಣವಾಗ್ತಿದೆ. ದೇಶ ವಿದೇಶದ ಹಲವು ಭಾಷೆಗಳಿಗೆ ಸಿನಿಮಾ ಡಬ್ ಆಗ್ತಿದೆ. ಫ್ರೆಂಚ್ ಸಂದರ್ಶನವೊಂದರಲ್ಲಿ ರಾಜಮೌಳಿ ಮಾತನಾಡಿದ್ದಾರೆ. "ನಾನು ಅಡ್ವೆಂಚರ್ ಸಿನಿಮಾಗಳಿಗೆ ದೊಡ್ಡ ಅಭಿಮಾನಿ. ಅದೇ ರೀತಿ ಈ ಸಿನಿಮಾ ಆರಂಭಿಸಿದೆವು.. ಹೋಗ್ತಾ ಹೋಗ್ತಾ ಅದು ದೊಡ್ಡದಾಗ್ತ ಹೋಯ್ತು.. ನಾಯಕ ಟೈಮ್ ಟ್ರಾವೆಲ್ ಮೂಲಕ ರಾಮನ ಯುಗಕ್ಕೆ ಪ್ರಯಾಣಿಸುತ್ತಾನೆ. ಅಲ್ಲಿ ದೇವಾನುವೇವತೆಗಳ ಕಥೆ ಇರುತ್ತೆ.. ತಂದೆ- ಮಗನ ಬಾಂಧವ್ಯ, ಪ್ರೀತಿ ಹಿನ್ನೆಲೆಯಲ್ಲಿ ಈ ಕಥೆ ಎಲ್ಲವೂ ನಡೆಯುತ್ತೆ" ಎಂದು ತಿಳಿಸಿದ್ದಾರೆ.
ಪ್ರಿಯಾಂಕ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ಕೂಡ 'ವಾರಣಾಸಿ' ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಏಪ್ರಿಲ್ 7ರಂದು ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರಲಿದೆ. ಐಮ್ಯಾಕ್ಸ್ ಸ್ಕ್ರೀನ್‌ಗಳಿಗಾಗಿ ಸಿನಿಮಾ ಕಟ್ಟಿಕೊಡಲಾಗ್ತಿದೆ. ಚಿತ್ರದಲ್ಲಿ ರುದ್ರ ಎಂಬುವ ಪಾತ್ರದಲ್ಲಿ ಮಹೇಶ್ ಬಾಬು ಮಿಂಚಿದ್ದಾರೆ. ಶ್ರೀರಾಮನಾಗಿ ಕೂಡ ಕೆಲ ಸಮಯ ತೆರೆಮೇಲೆ ದರ್ಶನ ಕೊಡಲಿದ್ದಾರೆ. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಈ ಚಿತ್ರಕ್ಕೂ ಕಥೆ ಸಿದ್ಧಪಡಿಸಿದ್ದಾರೆ. ಮಹೇಶ್ ಬಾಬು ತಂದೆ ಪಾತ್ರದಲ್ಲಿ ಪ್ರಕಾಶ್ ರಾಜ್ ನಟಿಸುತ್ತಿದ್ದಾರೆ.
ಇದೇ ಮೊದಲ ಬಾರಿಗೆ ಜಕ್ಕಣ್ಣ ನಿರ್ದೇಶನದಲ್ಲಿ ಪ್ರಕಾಶ್ ರಾಜ್ ಬಣ್ಣ ಹಚ್ಚಿದ್ದಾರೆ. ಪಿ. ಎಸ್ ವಿನೋದ್ ಛಾಯಾಗ್ರಹಣ, ಎಂ. ಎಂ ಕೀರವಾಣಿ ಸಂಗೀತ 'ವಾರಣಾಸಿ' ಚಿತ್ರಕ್ಕಿದೆ. ಕೆ. ಎಲ್ ನಾರಾಯಣ ಜೊತೆ ಸೇರಿ ಎಸ್. ಎಸ್ ಕಾರ್ತಿಕೇಯ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.